ಬಂಟ್ವಾಳ: ರಾತ್ರಿ ವೇಳೆ ರಸ್ತೆಯ ಮಧ್ಯೆ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಚಲಿಸಿ ಮಲಗಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಸಜೀಪ ಮುನ್ನೂರು ನಿವಾಸಿ ಕೃಷ್ಣಮೂರ್ತಿ ಹೇರಳ (50) ಎನ್ನಲಾಗಿದೆ.

ಅಪಘಾತದ ದೃಶ್ಯ ಸಿಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ವೊಂದರ ಸಮೀಪ ವ್ಯಕ್ತಿಯೋರ್ವರು ನಡೆದುಕೊಂಡು ಬಂದು ಆ ಬಳಿಕ ರಸ್ತೆಯಲ್ಲಿ ಮಲಗಿದ್ದಾರೆ. ಆ ವೇಳೆ ದ್ವಿಚಕ್ರ ವಾಹನವು ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಹೋಗಿ ಸ್ಕೂಟರ್ ಸವಾರ ಕೂಡ ರಸ್ತೆಗೆ ಎಳೆಯಲ್ಪಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಅಪಘಾತ ನಡೆದ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೃಷ್ಣಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.