ವಿಟ್ಲ: ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.
ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು 5 ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ತಂಡ ಆತನನ್ನು ತಡೆದು ನಿಲ್ಲಿಸಿ, ಲಾರಿ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಪೊಲೀಸ್ ಹೊಯ್ಸಳ ವಾಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ.