ಮಂಗಳೂರು: ದಕ್ಷಿಣ ಕನ್ನಡಕ್ಕೆ ಇನ್ನೊಂದು ಹೆಮ್ಮೆಯ ಗರಿ ಸೇರಿದೆ. ಜಿಲ್ಲೆಯ 7 ಗ್ರಾಮಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ವಿವಿಧ ಮಾನದಂಡಗಳ ಆಧಾರದಲ್ಲಿ ರಾಜ್ಯದಲ್ಲಿ ಅತ್ಯುತ್ತಮ ಉತ್ತಮ ಸಾಧನೆ ಮಾಡಿರುವ ಗ್ರಾಮ ಪಂಚಾಯ್ತಿಗಳಿಗೆ ಪ್ರತಿವರ್ಷ ನೀಡುವ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ 2020-21ನೇ ಸಾಲಿನಲ್ಲಿ ದ.ಕ. ಜಿಲ್ಲೆಯ 7 ಗ್ರಾ.ಪಂ.ಗಳು ಆಯ್ಕೆಯಾಗಿವೆ.
ಜಿ.ಪಂ. ಅಧಿಕಾರಿಗಳು ಸಂಬಂಧಪಟ್ಟ ಗ್ರಾ.ಪಂ.ಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾ ಸಮಿತಿ ಸಭೆಯಲ್ಲಿ ಚರ್ಚಿಸಿ ಪುರಸ್ಕಾರಕ್ಕೆ ಗ್ರಾ.ಪಂ.ಗಳನ್ನು ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲ್ಪಾಡಿ, ಮೂಡುಬಿದಿರೆ ತಾಲೂಕಿನ ಬೆಳುವಾಯಿ, ಬಂಟ್ವಾಳ ತಾಲೂಕಿನ ಇರ್ವತೊಕ್ಲು, ಪುತ್ತೂರು ತಾಲೂಕಿನ ಆರ್ಯಾಪು, ಕಡಬ ತಾಲೂಕಿನ ನೂಜಿಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಮಡಂತ್ಯಾರು, ಸುಳ್ಯ ತಾಲೂಕಿನ ಸಂಪಾಜೆ ಗ್ರಾ.ಪಂ ಗಳು ಈ ಪುರಸ್ಕಾರಕ್ಕೆ ಆಯ್ಕೆ ಆಗಿವೆ ಎಂದು ದಕ್ಷಿಣ ಕನ್ನಡ ಜಿ.ಪಂ. ಪ್ರಕಟಣೆಯಲ್ಲಿ ತಿಳಿಸಿದೆ.