ಪುತ್ತೂರು: ‘ರಾಷ್ಟ್ರೀಯ ಶಿಕ್ಷಣ ನೀತಿ’ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಪೊಲೀಸ್ ದೌರ್ಜನ್ಯ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪುತ್ತೂರು ಮಿನಿ ವಿದಾನ ಸೌಧದ ಬಳಿ ಸೆ.೧೬ ರಂದು ಸಂಜೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮುಂದೆ ಪ್ರತಿಭಟನಕಾರರು ಅನುಮತಿ ಇಲ್ಲದೆ ಮೆರವಣಿಗೆ ಮೂಲಕ ಬರುತ್ತಿರುವುದನ್ನು ಪ್ರಶ್ನಿಸಿ ತಡೆದ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಬಳಿಕ ಪ್ರತಿಭಟನಾಕಾರರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು. ಅಸ್ಪಕ್ ಬಂಟ್ವಾಳ ಅವರು ಮುಖ್ಯ ಭಾಷಣ ಮಾಡಿದರು.
ಸಿ ಎಫ್ ಐ ಜಿಲ್ಲಾಧ್ಯಕ್ಷ ಅನ್ಸಾರ್ ಬೆಳ್ಳಾರೆ, ಕಾರ್ಯದರ್ಶಿ ಮುಸ್ತಾಪ ಕೊಡಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.






























