ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ಉಪಕೇಂದ್ರ ವೀರಕಂಭ ವತಿಯಿಂದ ಗ್ರಾಮ ಪಂಚಾಯತ್ ವೀರಕಂಭ ಇದರ ಸಹಕಾರದೊಂದಿಗೆ ಕೋವಿಡ್ ಲಸಿಕಾ ಅಭಿಯಾನದ ಅಂಗವಾಗಿ ‘ಬೃಹತ್ ಕೋವಿಡ್ ಲಸಿಕಾ ಮೇಳ’ವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ನಡೆಯಿತು.
ಲಸಿಕ ಕೇಂದ್ರದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ಸದಸ್ಯರಾದ ಜಯಪ್ರಸಾದ್, ಜಯಂತಿ ಮೀನಾಕ್ಷಿ, ಲಕ್ಷ್ಮಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್, ಗ್ರಾಮಕರಣಿಕ ಕರಿಬಸಪ್ಪ ಮೊದಲಾದವರು ಖುದ್ದು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಅಪರಾಹ್ನದ ಬಳಿಕ ಗ್ರಾಮ ವ್ಯಾಪ್ತಿಯಲ್ಲಿ ಲಸಿಕಾ ಕೇಂದ್ರಕ್ಕೆ ಬರಲು ಸಾಧ್ಯವಾಗದ ಅವರನ್ನು ಗುರುತಿಸಿ ಅವರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಯಿತು.
ಲಸಿಕಾ ಕಾರ್ಯಕ್ರಮದಲ್ಲಿ ಗ್ರಾಮ ವ್ಯಾಪ್ತಿಯ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಜ್ಯೋತಿ ಎನ್ ಕೆ, ವಿಟ್ಲ ಸಮುದಾಯ ಕೇಂದ್ರದ ನೇತ್ರಾಧಿಕಾರಿ ಶ್ರೀಮತಿ ಶ್ರೀನಿಧಿ, ಆಶಾಕಾರ್ಯಕರ್ತರಾದ ಲೀಲಾವತಿ, ಕೋಮಲಾಕ್ಷಿ, ಸ್ನೇಹಲತಾ ಶೆಟ್ಟಿ, ಅಂಗನವಾಡಿ ಶಿಕ್ಷಕಿಯರಾದ ಸುಮತಿ, ರೇವತಿ, ಮಜಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಹಾಗೂ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು.