ಬಂಟ್ವಾಳ: ಬೈಕ್ ನಲ್ಲಿ ಬಂದು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರವನ್ನು ಎಳೆದೊಯ್ದ ಘಟನೆ ಕೆಲದಿನಗಳ ಹಿಂದೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲ್ ಬಳಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕು ಆರ್ಯಾಪು ವಲತ್ತಡ್ಕ ನಿವಾಸಿ ರೋಹಿತ್(22), ಪುತ್ತೂರು ತಾಲೂಕು ಆರ್ಯಾಪು ಕುಂಜಿರ್ ಪಂಜ ನಿವಾಸಿ ಲೋಹಿತ್ ಪಿ. ಆರ್. (ಸಚಿನ್) (20) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಕಳವು ಗೈದ ಕರಿಮಣಿ ಸರ, ಕಳ್ಳತನಕ್ಕೆ ಉಪಯೋಗಿಸಿದ ಬೈಕ್ ಸೇರಿ ಒಟ್ಟು 1,35,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೈಂಟೈನ್ ಡಿಸೋಜಾರವರ ನೇತ್ರತ್ವದಲ್ಲಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್, ಬಂಟ್ವಾಳ ನಗರ ಠಾಣಾ ಪಿ.ಎಸ್. ಐ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಹೆಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಪಾಲ್ಗೊಂಡಿದ್ದರು.