ವಿಟ್ಲ: ದ. ಕ. ಜಿ. ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೇಪು ಶಾಲಾ ಪ್ರಾರಂಭೋತ್ಸವ ಸೆ.20 ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೆಕ್ಕರೆ ಪ್ರಾರಂಭೋತ್ಸವದ ಪ್ರಯುಕ್ತ 6ನೇ ಮತ್ತು 7ನೇ ತರಗತಿ ಮಕ್ಕಳಿಗೆ ಪುಸ್ತಕ ಮತ್ತು ಪೆನ್ನು ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್, ಉಳ್ಳಾಲ್ತಿ ಸೇವಾ ಟ್ರಸ್ಟ್ ನ ಟ್ರಸ್ಟಿಯಾದ ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ಸುಲೋಚನಾ ಪೂಜಾರಿ(ಟ್ರಸ್ಟಿ), ಟ್ರಸ್ಟ್ ನ ಕಾರ್ಯದರ್ಶಿಗಳಾದ ಉಮೇಶ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಮಕ್ಕಳ ಪೋಷಕರು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲೆಯನ್ನು ತಳಿರು-ತೋರಣಗಳಿಂದ ಶಾಲೆಯನ್ನು ಸಿಂಗರಿಸಿ, ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಹಾಕಿ,ಥರ್ಮಲ್ ಸ್ಕ್ಯಾನ್ ಮಾಡಿ ತರಗತಿಗಳಿಗೆ ಕಳುಹಿಸಲಾಯಿತು. ಮುಖ್ಯ ಶಿಕ್ಷಕಿ ಭಾಗೀರಥಿ ಸ್ವಾಗತಿಸಿದರು. ಸಹ ಶಿಕ್ಷಕಿ ಚೆನ್ನಮ್ಮ ಧನ್ಯವಾದಗೈದರು.ನೀತಾ ಸಹಕರಿಸಿದರು.


