ಬೆಳ್ತಂಗಡಿ: ಮನೆಯವರೊಂದಿಗೆ ಜಗಳವಾಡಿ ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಡೀಕಯ್ಯ ಗೌಡ ಚಿಕಿತ್ಸೆ ಫಲಕಾರಿಯಾಗದೇ ಸೆ.20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಸೆ.19 ರಂದು ಮನೆಯವರ ಜೊತೆ ಜಗಳ ನಡೆಸಿ, ಮನೆಯಲ್ಲಿ ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಡೀಕಯ್ಯ ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.