ವಿಟ್ಲ: ಪಡಿಬಾಗಿಲು ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಉಚಿತ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಸೆ.20 ರಂದು ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶಸ್ವಿನಿ ಶಾಸ್ತ್ರಿ ಯವರು ವಹಿಸಿದ್ದರು. ಕೇಪುಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ ರಾಮ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಬಾಲಕೃಷ್ಣ ಕಾರಂತ, ಉಪಾಧ್ಯಕ್ಷೆ ಶ್ರೀಮತಿ ರೇಖಾ, ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ಜಿನಚಂದ್ರ ಜೈನ್, ಗೌರವಾಧ್ಯಕ್ಷ ಲಿಂಗಪ್ಪ ಗೌಡ, ಮಾಜಿ ಸೈನಿಕರು ಹಾಗೂ ಶಾಲಾ ಹಿತೈಷಿ ಸೀತಾರಾಮ ಶೆಟ್ಟಿ,ಎಸ್.ಡಿ.ಎಮ್.ಸಿ. ಸದಸ್ಯರಾದ ಶ್ರೀಮತಿ ಪುಷ್ಪಲತಾ, ಶ್ರೀಮತಿ ಉಷಾ.ಬಿ, ಶ್ರೀಮತಿ ರೇಣುಕಾ, ಶ್ರೀಮತಿ ಪ್ರೇಮಾಲತಾ, ಹಸೈನಾರ್, ಶ್ರೀಮತಿ ಸುಜಾತ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಮಿತಾ ರೈ,ಮಕ್ಕಳ ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ.ಎನ್.ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶಾಲಾ ಎಸ್.ಡಿ.ಎಮ್.ಸಿ.ವತಿಯಿಂದ ಹೂ ಮತ್ತು ಸಿಹಿತಿಂಡಿ ಹಂಚುವ ಮೂಲಕ ಶಾಲೆಗೆ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಯಿತು. ಸಹಶಿಕ್ಷಕಿ ಶ್ರೀಮತಿ ಲಲಿತಾ.ಕೆ ಧನ್ಯವಾದ ಸಲ್ಲಿಸಿದರು.ಜಿ.ಪಿ.ಟಿ.ಶಿಕ್ಷಕರಾದ ಮುತ್ತು ರಾಜ್ ಮಲ್ಲಿಗೆವಾಡ ಕಾರ್ಯಕ್ರಮ ನಿರೂಪಿಸಿದರು.


