ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡುವ 2021ನೇ ಸಾಲಿನ ‘ಎಕ್ಸಲೆನ್ಸ್’ ಅವಾರ್ಡ್ ಗೆ ಈ ಬಾರಿ ಮಂಗಳೂರಿನ ‘ಬ್ರೈಟ್ ವೇ ಇಂಡಿಯಾ ಕನ್ಸಲ್ಟನ್ಸಿ’ ಸಂಸ್ಥೆಯು ಆಯ್ಕೆಯಾಗಿದ್ದು ಸೆ.18 ರಂದು ಗೋವಾದಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬ್ರೈಟ್ ವೇ ಇಂಡಿಯಾ ಸಂಸ್ಥೆಯ ಆಡಳಿತ ನಿರ್ದೇಶಕರಾದ ಹರ್ಷ ಕುಮಾರ ರೈ ಮಾಡಾವು ಹಾಗೂ ನಿರ್ದೇಶಕರಾದ ಮನಮೋಹನ ರೈ ಚೆಲ್ಯಡ್ಕ ಅವರು ಸಂಸ್ಥೆಯನ್ನು ಮುನ್ನಡೆಸುತ್ತಿದ್ದು ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಉದ್ಯಮವನ್ನು ವಿಸ್ತರಿಸಿಕೊಂಡಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗೋವಾ ಮುಖ್ಯ ಮಂತ್ರಿ ಡಾ. ಪ್ರಮೋದ್ ಸಾವಂತ್, ರಾಜ್ಯಪಾಲರಾದ ಶ್ರೀಧರನ್ ಪಿಳ್ಳೆ ಹಾಗೂ ಸಚಿವರಾದ ಡಾ. ಗೋವಿಂದ ಗೌಡೇ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬ್ರೈಟ್ ವೇ ಇಂಡಿಯಾ ಸಂಸ್ಥೆಯ ಮುಖ್ಯ ಕಛೇರಿ ಮಂಗಳೂರಿನಲ್ಲಿದ್ದು, ಬೇರೆ ಬೇರೆ ಕಡೆಗಳಲ್ಲಿ ತಾಂತ್ರಿಕ ಸಿಬ್ಬಂದಿಗಳನ್ನು ಹೊಂದಿ, ಪೆಟ್ರೋಲಿಯಂ ಹಾಗೂ ಗ್ಯಾಸ್ ಕಂಪೆನಿಗಳಿಗೆ ಮತ್ತು ನಿರ್ಮಾಣ ಸಂಸ್ಥೆಗಳಿಗೆ ಕನ್ಸಲ್ಟಂಟ್ ಆಗಿ ಕಾರ್ಯ ನಿರ್ವಹಿಸುತ್ತದೆ.