ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ.ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಕೂಡ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.




























