ಬೆಂಗಳೂರು: ಕಾಂಗ್ರೆಸ್ನಿಂದ 20 ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳೀನ್ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಒಬಿಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಪಕ್ಷದ 20 ಜನ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಆ ಇಪ್ಪತ್ತು ಶಾಸಕರನ್ನು ಕರೆತರುವ ಜವಾಬ್ದಾರಿಯನ್ನು ಮುನಿರತ್ನಗೆ ನೀಡಲಾಗಿದೆ. ಕಾಂಗ್ರೆಸ್ನಲ್ಲಿ ಹಿಂದುಳಿದ ವರ್ಗದ ಶಾಸಕರಿಗೆ ಭವಿಷ್ಯವಿಲ್ಲ. ಈಗಾಗಲೇ ಕಾಂಗ್ರೆಸ್ನಿಂದ 17 ಶಾಸಕರು ಬಿಜೆಪಿಗೆ ಬಂದಿದ್ದಾರೆ, ಮುಂದೆ ಇನ್ನಷ್ಟು ಹಿಂದುಳಿದ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಹೇಳಿದ್ದಾರೆ.