ಬಂಟ್ವಾಳ: ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದ ಘಟನೆ ಸೆ.8 ರಂದು ನಡೆದಿತ್ತು.
ಈ ಘಟನೆಯ ಆರೋಪಿಗಳಾದ ರೋಹಿತ್(22) ಸಚಿನ್ (20) ರನ್ನು ಸೆ.19 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಗಳ ವಶದಿಂದ ಅವರುಗಳು ಸುಲಿಗೆ ಮಾಡಿದ ಮಾಂಗಲ್ಯ ಸರವನ್ನು ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ ಬೈಕ್ ಅನ್ನು ಸ್ವಾಧೀನಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು, ನ್ಯಾಯಾಲಯ ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಆರೋಪಿಗಳಿಗೆ ಬಂಟ್ವಾಳ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಆರೋಪಿಗಳ ಪರವಾಗಿ ಚಾಣಕ್ಯ ಲಾ ಚೇಂಬರ್ಸ್ ಪುತ್ತೂರು ಇಲ್ಲಿನ ನ್ಯಾಯವಾದಿಗಳಾದ ಶ್ಯಾಮ್ ಪ್ರಸಾದ್ ಕೈಲಾರ್ ಹಾಗೂ ವಿಮಲೇಶ್ ಸಿಂಗಾರಕೋಡಿ ವಾದಿಸಿದರು.