ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸದಸ್ಯರು, ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ಮಾಜಿ ಅಧ್ಯಕ್ಷರು, ಪ್ರಗತಿಪರ ಕೃಷಿಕರು, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉದ್ಯೋಗಿ ಅರುಣ್ ಶೆಟ್ಟಿ(55) ಅನಾರೋಗ್ಯದಿಂದಾಗಿ ಸೆ.23 ರಂದು ಸಂಜೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಇವರು ಉತ್ತಮ ಸಂಘಟಕರಾಗಿದ್ದರು. ಹಾಗೆಯೇ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಎಲ್ಲರ ಪ್ರೀತಿ ಪಾತ್ರರಾಗಿದ್ದರು.
ಮೃತರು ಪತ್ನಿ ಕುಸುಮ, ಮಕ್ಕಳಾದ ಪ್ರಮೀತ್, ಪ್ರಜ್ವಲ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.