ಮಂಗಳೂರು: ಹೊಟೇಲೊಂದರ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಾ ಪರಸ್ಪರ ಕಿರುಚಾಟದಲ್ಲಿ ನಿರತರಾಗಿದ್ದ ಆರೋಪದ ಮೇಲೆ ಮೂವರನ್ನು ಊರ್ವ ಪೊಲೀಸರು ಬಂಧಿಸಿದ ಘಟನೆ ಸೆ.23 ರ ರಾತ್ರಿ ಮಂಗಳೂರು ನಗರದ ಕೊಟ್ಟಾರ ಚೌಕಿ ಬಳಿ ನಡೆದಿದೆ.
ಬಂಧಿತರನ್ನು ಅಜಿತ್ ಕುಮಾರ್, ನಿತಿನ್ ಕುಲಾಲ್ ಮತ್ತು ವಿನೋದ್ ಕುಲಾಲ್ ಎಂದು ಗುರುತಿಸಲಾಗಿದೆ.
ಬಿಯರ್ ಬಾಟಲ್ ಹಿಡಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಪಾಯಕಾರಿಯಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.