ಪುತ್ತೂರು: ಬ್ಲಾಕ್ ಕಾಂಗ್ರೆಸ್ ಮುಖಂಡರು, ಹಿರಿಯ ಕಾಂಗ್ರೆಸ್ಸಿಗ ನಿವೃತ್ತ ಆರೋಗ್ಯ ಅಧಿಕಾರಿ ಕಿಟ್ಟಣ್ಣ ಗೌಡ ಬಪ್ಪಳಿಗೆ ರವರನ್ನು ಮತ್ತು ನಿವೃತ್ತಿ ಪಡೆದು ವಿಶ್ರಾಂತ ಜೀವನ ನಡೆಸುತ್ತಿರುವ ಖಜಾನೆ ಅಧಿಕಾರಿ ವಿಠ್ಠಲಾಚಾರಿ ಯವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿ, ಪಕ್ಷ ಸಂಘಟನೆಯ ಬಗ್ಗೆ ಸಲಹೆ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕೇರೇನಸ್ ಉಪಸ್ಥಿತರಿದ್ದರು.
