ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಅರಸಿನಮಕ್ಕಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ ಕಾರ್ಯಕ್ರಮ ಅ. 02 ರಂದು ಅರಸಿನಮಕ್ಕಿಯ ಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅರಸಿನಮಕ್ಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿ ವಹಿಸಲಿದ್ದಾರೆ. ಆಶೀರ್ವಚನ, ಗುರು ಸಂದೇಶವನ್ನು ವರ್ಕಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರು ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘ(ರಿ) ಅಧ್ಯಕ್ಷ ಪದ್ಮನಾಭ ಮಾಣಿಂಜ, ಬೆಳ್ತಂಗಡಿ ಘಟಕ ಯುವವಾಹಿನಿ(ರಿ)ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರದ ಕೋಶಾಧಿಕಾರಿ ಪದ್ಮರಾಜ್, ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರಿ ಸಂಘದ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ಶಿಶಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿಮಲಾ ಡಿ. ಆಗಮಿಸಲಿದ್ದಾರೆ ಎಂದು ಅರಸಿನಮಕ್ಕಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.