ಸುಬ್ರಹ್ಮಣ್ಯ: ಖ್ಯಾತ ಗಾಯಕ ವಿಜಯಪ್ರಕಾಶ್ ಕುಟುಂಬ ಸಮೇತವಾಗಿ ಸೆ.24 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ಮಾಡಿ ದೇವರ ದರ್ಶನ ಪಡೆದರು.
ಸೆ.23 ರಂದು ಆಗಮಿಸಿದ್ದ ಅವರು ವಸತಿ ಗೃಹವೊಂದರಲ್ಲಿ ಉಳಿಸಿಕೊಂಡಿದ್ದು, ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಶೇಷ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಜಯರಾಮ ರಾವ್ , ಗೋಪಿನಾಥ್ ನಂಬೀಶ ಮತ್ತಿತರರು ಉಪಸ್ಥಿತರಿದ್ದರು.