ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಶಿವಮೊಗ್ಗ ಮೂಲದ ನಯಾಜ್ (26) ಎಂದು ಗುರುತಿಸಲಾಗಿದೆ.

ಮೊಬೈಲ್ ಮೂಲಕ ಬಾಲಕಿ ಜೊತೆಗೆ ಸಂಪರ್ಕ ಮಾಡಿ ಸಲುಗೆ ಬೆಳೆಸಿಕೊಂಡಿದ್ದ ನಯಾಜ್, ಬಲವಂತದಿಂದ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ನಿನ್ನೆ ಆಕೆಯನ್ನು ಮತ್ತೆ ತನ್ನ ಜೊತೆ ಬರುವಂತೆ ಒತ್ತಾಯ ಮಾಡಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ನಯಾಜ್ ತನ್ನ ಮೊಬೈಲ್ ಫೋನ್ ಕಸಿದುಕೊಂಡು ಹೋಗಿದ್ದಾನೆ ಎಂದು ಬಾಲಕಿ ಆರೋಪಿ ವಿರುದ್ಧ ದೂರು ನೀಡಿದ್ದು, ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.