ಪುತ್ತೂರು: ನೆಟ್ಟಣಿಗೆ ಮೂಡ್ನೂರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಗೋಳಿತ್ತಡಿ ವಾರ್ಡ್ ಕಾರ್ಯಕರ್ತರ ಸಭೆ ಹಾಗೂ ಸಮಿತಿ ರಚನೆ ಕಾರ್ಯಕ್ರಮವು ವಲಯ ಅಧ್ಯಕ್ಷ ಕೆ ಮೂಸನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಮಹಮ್ಮದ್ ಬಡಗನ್ನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ್, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ನರಿಮೊಗರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಬ್ಲಾಕ್ ಉಪಾಧ್ಯಕ್ಷರುಗಳಾದ ಮೌರಿಸ್ ಮಸ್ಕೇರೇನಸ್, ರಾಮ ಮೇನಾಲ, ಬ್ಲಾಕ್ ಕಾರ್ಯದರ್ಶಿ ಗಳಾದ ರೋಶನ್ ರೈ ಬನ್ನೂರು, ಇಬ್ರಾಹಿಂ ಮೈರೋಳು, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ,ಬಡಗನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಆಬಿದ್ ಕುಕ್ಕಾಜೆ, ಕಾಂಗ್ರೆಸ್ ಮುಖಂಡರಾದ ವಿಕ್ರಂ ರೈ ಸಾಂತ್ಯ, ಗಿರೀಶ್ ರೈ ಮರಕ್ಕಡ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಪಂಚಾಯತ್ ಸದಸ್ಯ ಶ್ರೀರಾಮ ಪಕ್ಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು. ಅಬ್ದುಲ್ ಖಾದರ್ ಕಟ್ಟಪುಣಿ ಯವರು ವಂದಿಸಿದರು. ಯೂಸುಫ್ ಹಾಜಿ ತೋಟ ರವರನ್ನು ವಾರ್ಡ್ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
