ಪುತ್ತೂರು: ಕಾಂಗ್ರೆಸ್ ನ ಹಿರಿಯ ಮುಖಂಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ಜಿಲ್ಲಾ ವಕ್ಪ್ ಸಮಿತಿ ಸದಸ್ಯರಾಗಿರುವ ಯಾಕೂಬ್ ಹಾಜಿ(70) ಸೆ.26 ರಂದು ನಿಧನರಾದರು.
ಪುತ್ತೂರು ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದಿ.ಮಹಮ್ಮದ್ ಹಟ್ಟ ಅವರ ಸಹೋದರ ಆಗಿರುವ ಯಾಕೂಬ್ ಹಾಜಿ ಅವರು ಮರೀಲ್ ನಲ್ಲಿ ವಾಸ್ತವ್ಯ ಹೊಂದಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.