ಬ್ರಹ್ಮಾವರ: ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ, ಸುದೀರ್ಘ ಕಾಲ ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಬೆಳ್ಮಾರು ಪಟೇಲರ ಮನೆ ಡಾ. ಎಂ ಪಿ ರಾಘವೇಂದ್ರ ರಾವ್ (76) ಸೆ.26 ರಂದು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಘವೇಂದ್ರ ರಾವ್ ಅವರ ಪತ್ನಿ ಗೀತಾ ರಾವ್ ಒಂದು ತಿಂಗಳ ಹಿಂದೆ ನಿಧನ ಹೊಂದಿದ್ದು, ಅನಂತರ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ನಂತರ ಅವರು ಮೊಕ್ತೇಸರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿ, ಜಿಲ್ಲಾ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಕೊಳಲಗಿರಿಯಲ್ಲಿ ವೈದ್ಯಕೀಯ ಸೇವೆಯನ್ನು ಮುಂದುವರಿಸಿದ್ದರು. ಇವರು ಹತ್ತಾರು ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯದ ಮಾರ್ಗದರ್ಶಕರಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳ ನೇತಾರರಾಗಿದ್ದರು.
ಮೃತರು ವೈದ್ಯರಾದ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.




























