ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ-ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಬರುವ ಅ.1 ರಂದು ಸ್ಥಳ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ತಿಳಿಸಿದ್ದಾರೆ.
ಅವರು ಸೆ.27 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣಕನ್ನಡ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಮಕುಂಜಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೂ ಮುನ್ನಅಲ್ಲಿನ ಪ್ರದೇಶವನ್ನುಕುಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪಾಲಿಕ್ಲೀನಿಕ್‍ನ ಉಪನಿರ್ದೇಶಕಡಾ. ರಾಮಪ್ರಕಾಶ್.ಡಿ, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯಇಲಾಖೆಯಉಪನಿರ್ದೇಶಕಡಾ.ಟಿ.ಜಿ ಪ್ರಸನ್ನಕುಮರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಲವಕುಮಾರ್ ಹೆಚ್.ಆರ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯ ನಿರ್ವಾಹಣಾಧಿಕಾರಿ ಪುಷ್ಪಲತಾ, ಅಧ್ಯಕ್ಷ ಮೋಹನ್‍ರಾಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.