ಪುತ್ತೂರು: ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇರುವ ಮಾಹಿತಿ ದೊರೆತು ಸಾರ್ವಜನಿಕರು ಮನೆಯ ಮುಂಭಾಗ ಸೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನದಲ್ಲಿ ಸೆ.29 ರಂದು ನಡೆದಿದೆ ಎಂದು ತಿಳಿದು ಬಂದಿದೆ.
ಸೆ.29 ರಂದು ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿಯೊಬ್ಬಳು ತಂಗಿದ್ದಾಳೆ ಎನ್ನುವ ಬಗ್ಗೆ ಮಾಹಿತಿ ದೊರೆತ ಸ್ಥಳೀಯರು ಮನೆ ಬಳಿ ತೆರಳಿ ನೋಡಿದಾಗ ಯುವತಿಯೊಬ್ಬಳಿರುವುದು ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ತಿಳಿಯುತ್ತಿದಂತೆ ಅನ್ಯಕೋಮಿನ ಯುವಕನೋರ್ವನ ಮನೆ ಬಳಿ ಸಾರ್ವಜನಿಕರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು, ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ಮನೆಗೆ ಆಗಮಿಸಿದಾಗ ಒಂದು ಗಂಟೆಗಳ ಕಾಲ ಬಾಗಿಲು ತೆಗೆಯದೆ, ನಂತರ ಬಾಗಿಲು ತೆಗೆದಿದ್ದು ಮನೆಯೊಳಗೆ ಹುಡುಕಾಡಿದಾಗ ಯುವತಿ ಮನೆಯಲ್ಲಿ ಇಲ್ಲದೆ ಕಾರಣ ಯುವತಿಯನ್ನು ಬೇರೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯರು ಅಭಿಪ್ರಾಯಿಸಿದ್ದಾರೆ.
ಯುವಕ ದೇಲಂಪಾಡಿ ಕಡೆ ಕೆಲಸಕ್ಕೆ ತೆರಳುತತ್ತಿದ್ದು, ಈ ಸಂದರ್ಭದಲ್ಲಿ ಯುವತಿಯ ಪರಿಚಯವಾಗಿ ಅವಳನ್ನು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಮನೆಗೆ ಕರೆ ತಂದಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳದಲ್ಲಿದ್ದ ಸಾರ್ವಜನಿಕರ ಗುಂಪನ್ನು ಚದುರಿಸಿ, ಅನ್ಯಕೋಮಿನ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯಿದಿದ್ದಾರೆ ಎಂದು ತಿಳಿದು ಬಂದಿದೆ.