ಪುತ್ತೂರು: ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇರುವ ಮಾಹಿತಿ ದೊರೆತು ಸಾರ್ವಜನಿಕರು ಮನೆಯ ಮುಂಭಾಗ ಸೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನದಲ್ಲಿ ನಡೆದಿತ್ತು, ಆಕೆಯನ್ನು ಕಾಸರಗೋಡಿನ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 18 ವರ್ಷ ದಾಟಿರುವ ಕಾರಣ ಅವಳ ಇಷ್ಟದಂತೆ ವ್ಯವಹರಿಸಲು ನ್ಯಾಯಾಲಯ ಆಕೆಗೆ ಸೂಚಿಸಿದ್ದು, ಯುವತಿ ಸಿದ್ಧಿಕ್ ಜೊತೆ ತೆರಳಲು ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದಳು.
ಆದರೆ ಇಂದು ಈ ಪ್ರಕರಣಕ್ಕೆ ಹೊಸ ತಿರುವು ಸೃಷ್ಟಿಯಾಗಿದ್ದು,ಯುವತಿ ನೆಟ್ಟಣಿಗೆ ಮುಡ್ನೂರು ಗ್ರಾಮದ ಬಶಿರಡ್ಕ ಬಸ್ ನಿಲ್ದಾಣದಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.
ಬಸ್ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಯಾವುದೇ ಪ್ರಾಣಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.