ಪುಣಚ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 20 ಸ್ಥಾನಗಳ ಪೈಕಿ 18 ಸ್ಥಾನವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಪುಣಚ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿವಂತೆ ಮಾಡಿದ ಮತದಾರರಿಗೆ, ವಿಜಯ ಗೊಂಡ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಭೆ ಪುಣಚ ದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೋಡಂದೂರು, ತಾಲೂಕು ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಅಡ್ಯನಡ್ಕ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.