ವಿಟ್ಲ: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಸೆ.17 ರಿಂದ ಅ.7 ರ ವರೆಗೆ ದೇಶದಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ಅ.03 ರಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಕೆ.ಎಂ.ಸಿ. ಬ್ಲಾಡ್ ಬ್ಯಾಂಕ್ ಮಂಗಳೂರು ಇದರ ಸಹಕಾರದೊಂದಿಗೆ, ಯುವ ಮೋರ್ಚಾ, ಓಬಿಸಿ ಮೋರ್ಚಾ, ಸಾಮಾಜಿಕ ಜಾಲತಾಣ ಪ್ರಕೋಷ್ಟ ಇದರ ವತಿಯಿಂದ ವಿಟ್ಲ-ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ರಕ್ತದಾನ ನೀಡಿದವರಿಗೆ ಕೆ.ಎಂ.ಸಿ(K.M.C) ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಕಾರ್ಡ್ ಲಭ್ಯ ಎಂದು ವಿಟ್ಲ-ಪಡ್ನೂರು ಬಿಜೆಪಿ ಮಹಾಶಕ್ತಿಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























