Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ:; ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿ ಹೊಳೆಯುವ ವಜ್ರಗಳಾಗಿ ರೂಪುಗೊಳ್ಳಬೇಕು- ಗಣೇಶ್

October 2, 2021
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ:; ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿ ಹೊಳೆಯುವ ವಜ್ರಗಳಾಗಿ ರೂಪುಗೊಳ್ಳಬೇಕು- ಗಣೇಶ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯವಾಗುತ್ತದೆ ಎಂದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಉತ್ತಮ ಅಂಕಗಳನ್ನು ರ‍್ಯಾಂಕ್‌ಗಳನ್ನು ಗಳಿಸುವುದು ವಿದ್ಯಾರ್ಥಿಗಳು ಮಾಡಿದಂತಹ ಸತತ ಪರಿಶ್ರಮದಿಂದಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಗೌರವಿಸಿ, ಪ್ರತಿಭೆಯನ್ನು ಸಮಾಜಕ್ಕೆ ತೋರ್ಪಡಿಸುವಂತಾಗಬೇಕು. ನಮ್ಮ ಭವಿಷ್ಯವನ್ನು ನಾವೇ ನಿರ್ಧರಿಸಬೇಕು. ಪಠ್ಯವನ್ನು ಮೀರಿದ ಜೀವನ ಪಾಠವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಇಚ್ಛಾಶಕ್ತಿ, ಆತ್ಮಸ್ಥೆರ್ಯಗಳನ್ನು ಬೆಳೆಸಿಕೊಳ್ಳಬೇಕು. ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವು ಗುರುತಿಸುವಂಥ ಕಾರ್ಯಗಳನ್ನು ಕೈಗೊಳ್ಳಬೇಕು. ಕಾಲೇಜಿನಲ್ಲಿ ಕಲಿತ ಪ್ರತಿಭಾನ್ವಿತ ಕುಡಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನತನದ ಛಾಪು ಒತ್ತುವುದರೊಂದಿಗೆ ದೇಶದ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಕಾಲೇಜಿನಲ್ಲಿ ಕಲಿತ ವಿದ್ಯಾಲಯದ ಚಿಂತನೆಯನ್ನು ದೈನಂದಿನ ಬದುಕಿನಲ್ಲಿ ಅನುಷ್ಠಾನಗೊಳಿಸಬೇಕು. ವಿವೇಕಾನಂದರ ಹೆಸರನ್ನು ಇಟ್ಟುಕೊಂಡ ಈ ಸಂಸ್ಥೆಯ ಧ್ಯೇಯ, ವಿವೇಕಾನಂದರ ವ್ಯಕ್ತಿತ್ವ ಎಲ್ಲರದಾಗಬೇಕು. ಈ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿ ಹೊಳೆಯುವ ವಜ್ರಗಳಾಗಿ ರೂಪುಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಗೆ ಎತ್ತಿ ಹಿಡಿದ ಕನ್ನಡಿ. ವಿದ್ಯಾರ್ಥಿಗಳ ಈ ಪ್ರತಿಭೆಯು ಸಮಾಜದ ಸುಖಕ್ಕೆ ಉಪಯೋಗಬೇಕು. ಸಹಜ ಕಲಿಕೆಯ ಖುಷಿಯನ್ನು ಅನುಭವಿಸಬೇಕು. ತಮ್ಮ ಯಶಸ್ಸಿಗೆ ಕಾರಣರಾದ ವ್ಯಕ್ತಿಗಳನ್ನು ನಾವು ಎಂದೂ ಮರೆಯಬಾರದು. ಶಿಕ್ಷಣದ ಎಲ್ಲ ಆಯಾಮಗಳನ್ನು ಗ್ರಹಿಸುವ ಸಾಮರ್ಥ್ಯವನ್ನು ಪಡೆಯಬೇಕು. ಜೀವನದ ಗುರಿಯನ್ನು ತಲುಪುವಲ್ಲಿ ಸಾಕಷ್ಟು ಸವಾಲುಗಳನ್ನು ವಿದ್ಯಾರ್ಥಿಗಳು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿನ ದೌರ್ಬಲ್ಯದಿಂದ ಹೊರಬಂದು ಭಾವನಾತ್ಮಕ ಸ್ಥಿರತೆಯನ್ನು ಗಟ್ಟಿ ಮಾಡಿಕೊಂಡಾಗ ನಮ್ಮಲ್ಲಿನ ಶಕ್ತಿಯು ಹೊರಹೊಮ್ಮಲು ಸಾಧ್ಯವಾಗುತ್ತದೆ. ಯಾವುದೇ ಕ್ಷೇತ್ರವಾದರೂ ಅದನ್ನು ಆರಿಸಿ ಸಾಧನೆ ಮಾಡುತ್ತಾ ಮುಂದುವರೆಯಬೇಕು, ಜೊತೆಗೆ ತಾನು ಕಲಿತ ಸಂಸ್ಥೆಯನ್ನು, ಕಲಿಸಿದ ಗುರುಗಳನ್ನು ಗೌರವಿಸುವಂತಾಗಬೇಕು. ಜೀವನದಲ್ಲಿ ನಂಬಿಕೆ, ನಮ್ರತೆ ಮತ್ತು ವಿನಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

Advertisement
Advertisement

ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧಿ ನಮನ:

ಕಾರ್ಯಕ್ರಮದಲ್ಲಿ ಅತಿಥಿಗಳು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವವನ್ನು ಅರ್ಪಿಸಲಾಯಿತು. ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧಿ ಜಯಂತಿಯ ಬಗ್ಗೆ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ವಾಸುದೇವ ತಿಲಕ್ ಮಾತನಾಡಿ ಧೀಮಂತ ವ್ಯಕ್ತಿತ್ವವುಳ್ಳ ಗಾಂಧೀಜಿ ಮತ್ತು ಶಾಸ್ತ್ರೀಜಿಯವರಿಬ್ಬರ ಜೀವನ ಮತ್ತು ಆದರ್ಶಗಳು ಎಲ್ಲಾ ಕಾಲಕ್ಕೂ ಅನುಸರಣೀಯವಾದದ್ದು. ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೌಲ್ಯಗಳು ಮತ್ತು ತತ್ವಗಳನ್ನು ಒಳಗೊಂಡಿದ್ದ ಅವರ ಜೀವನವು ಈ ದೇಶವಾಸಿಗಳಿಗೆ ಸದಾಕಾಲಕ್ಕೂ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ. ದೇಶಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಇಂಥ ಮಹಾತ್ಮರುಗಳ ಬಗೆಗೆ ತಿಳಿದುಕೊಂಡು, ಅವರು ತೋರಿದ ಮಾರ್ಗದಲ್ಲಿ ನಡೆಯುವುದು ನಮ್ಮ ಕರ್ತವ್ಯವಾಗಬೇಕು ಎಂದರು.

ದೀಪ ಪ್ರದಾನ ಕಾರ್ಯಕ್ರಮ :

2020-21 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಮಯೂರ್ ಬಿ.ಜಿ, ಕ್ಷಿತಿಜ್ ಎಚ್.ಎಸ್ ಮತ್ತು ಶ್ರೇಯಾ ಪಿ ರವರಿಂದ ದೀಪ ಪ್ರಜ್ವಲಿಸಿ 2021-22 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪುನೀತ್, ಕುಲದೀಪ್‌ಸಿಂಗ್ ಮತ್ತು ಧರಿತ್ರಿರವರಿಗೆ ಹಸ್ತಾಂತರಿಸಲಾಯಿತು. ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದೊಂದಿಗೆ ಕಿರಿಯ ವಿದ್ಯಾರ್ಥಿಗಳು ಮುನ್ನಡೆಯಬೇಕೆಂಬುದು ಈ ಕಾರ್ಯಕ್ರಮದ ಆಶಯವಾಗಿತ್ತು.

ವಿಶೇಷ ಸನ್ಮಾನ:
ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳು ಸೇರಿದಂತೆ 2020-21 ನೇ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಎಗ್ರಿಕಲ್ಚರ್ ಬಿ.ಯಸ್ಸಿ.ಯಲ್ಲಿ 530 ನೇ ರ‍್ಯಾಂಕ್, ಇಂಜಿನಿಯರಿಂಗ್‌ನಲ್ಲಿ 1582ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತುಯೋಗ ವಿಭಾಗದಲ್ಲಿ 974 ನೇ ರ‍್ಯಾಂಕ್ ಗಳಿಸಿದ ಸಿಂಚನಾಲಕ್ಷ್ಮೀ, ಎಗ್ರಿಕಲ್ಚರ್ ಬಿ.ಯಸ್ಸಿ.ಯಲ್ಲಿ 579 ನೇ ರ‍್ಯಾಂಕ್ ಮತ್ತು ಇಂಜಿನಿಯರಿಂಗ್ ನಲ್ಲಿ 1153ನೇ ರ‍್ಯಾಂಕ್ ಗಳಿಸಿದ ಅಮೃತಾ ಭಟ್, ಇಂಜಿನಿಯರಿಂಗ್ ವಿಭಾಗದಲ್ಲಿ 677ನೇ ರ‍್ಯಾಂಕ್ ಹಾಗೂ ಎಗ್ರಿಕಲ್ಚರ್ ಬಿ.ಯಸ್ಸಿ.ಯಲ್ಲಿ 1385 ನೇ ರ‍್ಯಾಂಕ್ ಗಳಿಸಿದ ಗಣೇಶ ಕೃಷ್ಣ, ಇಂಜಿನಿಯರಿಂಗ್ ವಿಭಾಗದಲ್ಲಿ 784ನೇ ರ‍್ಯಾಂಕ್ ಗಳಿಸಿದ ಚಿನ್ಮಯಿ ಇವರಿಗೆ ಶಾಲು ಹೊದಿಸಿ ಟ್ಯಾಬ್, ಕಡತ ಮತ್ತು ಬ್ಯಾಗ್‌ನ್ನು ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.

ಹಾಗೆಯೇ ಇಂಜಿನಿಯರಿಂಗ್ ವಿಭಾಗದಲ್ಲಿ 1383ನೇ ರ‍್ಯಾಂಕ್ ಗಳಿಸಿದ ಅವನೀಶ ಕೆ, ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ರಾಷ್ಟಮಟ್ಟದಲ್ಲಿ 852 ನೇ ರ‍್ಯಾಂಕ್ ಗಳಿಸಿದ ಪ್ರೀತಂ ಜಿ, ನಾಟಾ ಪರೀಕ್ಷೆಯಲ್ಲಿ 254 ನೇ ರ‍್ಯಾಂಕ್ ಗಳಿಸಿದ ಶೆಫಾಲಿಕಾ, ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ ಶಿಲ್ಪ ಎಂ.ಕೆ , ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದ ರಕ್ಷಿತಾ ಸಿ.ಪಿ, ಶಶಾಂಕ್ ಬಿ, ಮನೋಜ್ ಎಸ್.ಆರ್, ಅವನೀಶ್ ಕೆ, ಚಿನ್ಮಯಿ, ಅಪರ್ಣ ಬಾಳಿಗ , ಶ್ರೇಯಸ್ ಎಚ್, ಶ್ರೀರಕ್ಷಾ , ಸಿಂಚನಾಲಕ್ಷ್ಮಿ, ಅಭಿಜ್ಞಾಲಕ್ಷ್ಮೀ, ವಾಣಿಜ್ಯ ವಿಭಾಗದಲ್ಲಿ ಕಾಲೇಜಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಅನನ್ಯ ಪಿ, ಕಲಾ ವಿಭಾಗದಲ್ಲಿ ಕಾಲೇಜಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಪಂಚಮಿ ಕುಮಾರಿ ಇವರನ್ನು ಶಾಲು ಹೊದಿಸಿ ಕಡತ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಾದ ಶಿಲ್ಪ ಎಂ.ಕೆ, ಗಣೇಶಕೃಷ್ಣ ಮತ್ತು ಅಮೃತ ಭಟ್ ಮಾತನಾಡಿ ಈ ಕಾಲೇಜಿನಲ್ಲಿ ದೊರೆತ ನಿರಂತರ ಪ್ರೋತ್ಸಾಹವೇ ನಮ್ಮ ಯಶಸ್ಸಿಗೆ ಕಾರಣ. ಉಪನ್ಯಾಸಕರ ಪಠ್ಯಕ್ರಮ, ಸಲಹೆ ಸೂಚನೆಗಳು ನಮ್ಮಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿಯಾಗಿವೆ. ಉತ್ತಮ ಶಿಕ್ಷಣವನ್ನು ನೀಡಿದ ವಿದ್ಯಾಸಂಸ್ಥೆ, ಗುರುಹಿರಿಯರು ಮತ್ತು ಪ್ರೋತ್ಸಾಹಿಸಿದ ಹೆತ್ತವರಿಗೆ ಕೃತಜ್ಞರಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ ಶಾಸ್ತ್ರಿ ಮಾತನಾಡಿ ಸಾಧಕ ವಿದ್ಯಾರ್ಥಿಗಳಿಗೆ ಮಾಡುವ ಸನ್ಮಾನಗಳು ಎಲ್ಲರ ಪಾಲಿಗೆ ಆಶೀರ್ವಾದವಾಗಿ ಪರಿಣಮಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಲಿ. ಎಲ್ಲರೂ ಉನ್ನತ ಗುರಿಯನ್ನು ತಲುಪಿ ದೇಶಸೇವೆಯನ್ನು ಮಾಡುವಂತಾಗಬೇಕು. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗಿರಲಿ ಎಂದು ಹಾರೈಸಿದರು.
ಬಳಿಕ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ, ವಿಜ್ಞಾನ, ಕಲಾ, ಕ್ರೀಡೆ ಮತ್ತು ಚಿಗುರು ಸಂಘ ಆಯೋಜಿಸಿದ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶಶಿಕಲಾ ದೇವಿ, ಸಂಚಾಲಕ ಸಂತೋಷ್ ಬಿ, ಸದಸ್ಯೆ ವತ್ಸಲಾರಾಜ್ಞಿ, ರವಿ ಮುಂಗ್ಲಿಮನೆ, 2020-21 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಯೂರ್ ಬಿ.ಜಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ದಯಾಮಣಿ ಕಾರ್ಯಕ್ರಮವನ್ನು ನಿರೂಪಿಸಿ ಆಂಗ್ಲ ವಿಭಾಗದ ಮುಖ್ಯಸ್ಥ ಪರಮೇಶ್ವರ ಶರ್ಮ ವಂದಿಸಿದರು.

Advertisement
Previous Post

ವಿಟ್ಲ: ಗಾಂಧೀ ಜಯಂತಿ ಹಾಗೂ ಶಾಸ್ತ್ರೀ ಜಯಂತಿ ಪ್ರಯುಕ್ತ ಬಿಜೆಪಿ ಒಬಿಸಿ ಮೋರ್ಚಾದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Next Post

ಪುತ್ತೂರು: ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಅಶಕ್ತರಿಗೆ ವೀಲ್ ಚೇರ್ ಹಸ್ತಾಂತರ

OtherNews

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page