ವಿಟ್ಲ: ಕೇಪು- ಕಲ್ಲಂಗಳ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚಿಗೆ ಪದೋನ್ನತಿ ಹೊಂದಿದ ಶಿಕ್ಷಕರಿಗೆ ಹಾಗೂ ನಿವೃತ್ತಿ ಹೊಂದಿದ ಪ್ರಥಮ ದರ್ಜೆ ಸಹಾಯಕರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ರೀಮತಿ ಯಶಸ್ವಿನಿ ಶಾಸ್ತ್ರೀ ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಸದ್ರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕರಾಗಿ ಪದೋನ್ನತಿ ಹೊಂದಿರುವ ಸುಬ್ರಹ್ಮಣ್ಯ ಭಟ್ ಕೆ.ಜಿ ಹಾಗೂ ವಿನುತಾ, ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಕುಸುಮ ಎಸ್. ಡಿ ಯವರನ್ನು ಗೌರವಿಸಲಾಯಿತು.
ಹಿಂದಿನ ಎರಡು ಶೈಕ್ಷಣಿಕ ವರ್ಷಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಬಾಲಚಂದ್ರ ನಾಯಕ್ ಶುಭಹಾರೈಸಿದರು. ಸುಬ್ರಹ್ಮಣ್ಯ ಭಟ್ ಕೆ.ಜಿ. ಯವರು ತಮ್ಮ ಅನುಭವ ಹಂಚಿಕೊಂಡರು. ಶಾಲಾ ಮುಖ್ಯ ಗುರುಗಳಾದ ಮಾಲತಿ ಕೆ. ಅಭಿನಂದನಾ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ರಾಘವ ಮಣಿಯಾಣಿ ಸಾರಡ್ಕ, ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ್,ಜಯಶೀಲ, ಮೋಹಿನಿ, ಎಸ್ಡಿಎಂಸಿ ಸದಸ್ಯ ಗೋವಿಂದ ನಾಯಕ್, ಶ್ರೇಯಸ್,ತಾರನಾಥ ಆಳ್ವ, ರಾಧಾ ಕೃಷ್ಣ ಶೆಟ್ಟಿ, ಗೌರಿ ದೇವಿ, ಶಕುಂತಲಾ ಬಿ, ಪುಷ್ಪ, ಅತಿಥಿ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಲಕ್ಷ್ಮಣ ಟಿ. ನಾಯಕ್ ಸ್ವಾಗತಿಸಿ, ರಮೇಶ್ ಟಿ ನಿರೂಪಿಸಿ, ವಸಂತಿ ಕುಮಾರಿ ಧನ್ಯವಾದಗೈದರು.