ವಿಟ್ಲಪಡ್ನೂರು: ಬಿಜೆಪಿ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ, ಒಬಿಸಿ ಮೋರ್ಚಾ, ಸಾಮಾಜಿಕ ಜಾಲತಾಣ ಪ್ರಕೋಷ್ಟ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯಲಿರುವ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರವು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೊಂಬಯ್ಯ ಅರಳ, ಉಪಾಧ್ಯಕ್ಷರಾದ ಗಣೇಶ್ ರೈ ಮಾಣಿ, ಜಿಲ್ಲಾ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಮೋನಪ್ಪ ದೇವಸ್ಯ, ಎಸ್.ಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ದಿನೇಶ್ ಅಮ್ಟೂರು, ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಟದ ಸದಸ್ಯರಾದ ತನಿಯಪ್ಪ ಗೌಡ, ವಿಟ್ಲಪಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸನತ್ ಕುಮಾರ್ ರೈ.
ಪ್ರಧಾನ ಕಾರ್ಯದರ್ಶಿ ಅರವಿಂದ ರೈ, ಬಿಜೆಪಿ ಪ್ರಮುಖರಾದ ಅಭಿಷೇಕ್ ರೈ, ಮಾಧವ ಮಾವೆ ತಾಲೂಕು ಒಬಿಸಿ ಮೋರ್ಚಾ ಅಧ್ಯಕ್ಷರಾದ ಆನಂದ ಶಂಬೂರು, ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳ, ಕಾರ್ಯದರ್ಶಿ ಚಿದಾನಂದ, ಜಿಲ್ಲಾ ಒಬಿಸಿ ಮೋರ್ಚಾದ ಪುರುಷೋತ್ತಮ್ ಶಂಭುರು, ಯುವಮೋರ್ಚಾ ತಾಲೂಕು ಅಧ್ಯಕ್ಷರಾದ ಪ್ರದೀಪ್ ಅಜ್ಜೀಬೆಟ್ಟು, ತಾಲೂಕು ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಹ ಸಂಚಾಲಕರಾದ ಶಿವರಾಮ್ ಶೆಟ್ಟಿ, ಯುವಮೋರ್ಚಾ ಕಾರ್ಯದರ್ಶಿ ಹೇಮಂತ್ ಗೌಡ, ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮೆ ಶಂಕರಿ ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ವಿಟ್ಲಪಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಅಧ್ಯಕ್ಷರಾದ ಕಿರಣ್ ಪೂಜಾರಿ, ಒಬಿಸಿ ಮೋರ್ಚಾದ ಮಹಾಬಲ ಪೂಜಾರಿ, ಅನಂತಾಡಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಕುಸುಮೋದರ್, ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.