ಉಡುಪಿ: ಮಲ್ಪೆ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡಿದೆ. ಭಾರೀ ಗಾತ್ರ ಉದ್ದ ಬಾಲ.. ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆಯಿರುವ ಮೀನು ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿತು.
ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರೀ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಮೀನು 84 ಕಿಲೋ ತೂಗುತ್ತಿತ್ತು. ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮಿನನ್ನು ರವಾನೆ ಮಾಡಲಾಗಿದೆ.