ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ನ್ಯಾಯಾಲಯದ ತೀರ್ಪಿನಂತೆ ಹಿಂದೂ ಆರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಹಾಗೂ ಇದೇ ಬರುವ ಡಿ.18 ರಂದು ದತ್ತ ಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಗಮಿಸುವಂತೆ ವಿಶ್ವಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಚಿಕ್ಕಮಂಗಳೂರಿನ ದತ್ತ ಪೀಠವು ಹಿಂದಿನ ಹಲವು ವರ್ಷಗಳಿಂದ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದ್ದು ದುರದೃಷ್ಟವಶಾತ್ ಅಲ್ಲಿ ಮುಸಲ್ಮಾನ ಮೌಲ್ವಿಗಳು ಪೂಜೆ ಸಲ್ಲಿಸುತ್ತಿದ್ದು ಪ್ರಸ್ತುತ ಹೈಕೋರ್ಟ್ ನ ತೀರ್ಪಿನ ಪ್ರಕಾರ ಮೌಲ್ವಿಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಹಿಂದೂ ಸಮಾಜವು ಈ ಒಂದು ಅಪೇಕ್ಷೆಯನ್ನು ಮುಂದಿಟ್ಟುಕೊಂಡು ಹೋರಾಟವನ್ನು ನಡೆಸುತ್ತಾ ಬಂದಿದೆ ಹೈಕೋರ್ಟ್ ನ ಈ ತೀರ್ಪು ಹಿಂದೂ ಸಮಾಜದಲ್ಲಿ ಸಂತಸವನ್ನು ತಂದಿದೆ, ಹಿಂದೂ ಸಮಾಜದ ನಂಬಿಕೆಗಳಿಗೆ ಬೆಲೆ ಸಿಕ್ಕಂತಾಗಿದೆ ಹಾಗೂ ನ್ಯಾಯಾಲಯದ ಈ ತೀರ್ಪು ಹಿಂದೂ ಸಮಾಜದ ಗೆಲುವಾಗಿದೆ. ನ್ಯಾಯಾಲಯವು ನೀಡಿದ ತೀರ್ಪಿನಂತೆ ತಕ್ಷಣ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು ಹಾಗೂ 25 ವರುಷಗಳಿಂದ ಹಿಂದೂ ಸಮಾಜದ ಆಪೇಕ್ಷೆಯಂತೆ ಬಜರಂಗದಳವು ದತ್ತ ಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ಪ್ರತಿವರ್ಷವೂ ದತ್ತಮಾಲಧಾರಣೆ ಹಾಗೂ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುತ್ತದೆ.ಪ್ರತಿ ವರುಷದಂತೆ ಈ ವರುಷವೂ ಡಿ.18 ರಂದು ದತ್ತ ಜಯಂತಿಯ ಪ್ರಯುಕ್ತ ನಡೆಯುವ 3 ದಿನದ ಕಾರ್ಯಕ್ರಮಕ್ಕೆ ಸಂಪೂರ್ಣ ಹಿಂದೂ ಧಾರ್ಮಿಕ ವಿಧಿವಿಧಾನದಂತೆ ನಡೆಸಲು ಅನುವು ಮಾಡಿಕೊಡಬೇಕು ಹಾಗೂ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಆಗಮಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಪ್ರಮುಖರಾದ ಬಜರಂಗದಳ ಪ್ರಾಂತ ಸಂಯೋಜಕ್ ಸುನಿಲ್ ಕೆ ಆರ್, ಪ್ರಾಂತ ಸಹ ಸಂಯೋಜಕ್ ರಘು ಸಕಲೇಶಪುರ ಮತ್ತು ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.