ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿಯವರನ್ನು ನೇಮಕ ಮಾಡಲಾಗಿದೆ.
ಹಾಲಿ ಅಧ್ಯಕ್ಷ ಕೆ. ಶ್ರೀಕಾಂತ್ ರವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ರವೀಶ ತಂತ್ರಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ರಾಗಿ ಕಾರ್ಯ ನಿರ್ವಹಿಸು ತ್ತಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿ ರಾಜ್ಯ ಸಮಿತಿಯಲ್ಲಿ ಬದಲಾವಣೆ ತಂದಿದ್ದು, ಇದರಂತೆ ಕಾಸರಗೋಡು ಜಿಲ್ಲಾಧ್ಯಕ್ಷರ ರನ್ನು ಬದಲಾಯಿಸಿದೆ.
ಈ ಹಿಂದೆ ಮಂಜೇಶ್ವರ, ಕಾಸರಗೋಡು ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವೀಶ ತಂತ್ರಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ವಲಯಗಳಲ್ಲಿ ಸಕ್ರಿಯರಾಗಿದ್ದಾರೆ.