ಮಂಗಳೂರು: ನಗರದ ಮೋರ್ಗನ್ಸ್‌ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ.ಲಿ. ಇದರ ಮೋರ್ಗನ್ಸ್‌ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಹಾಗೂ ಕೆಲಸದವರೊಬ್ಬರ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ.
ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು, ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು, ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ಹಣೆಗೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.
ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.