ಪುತ್ತೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥಗೊಂಡ ಘಟನೆ ಅ.6 ರಂದು ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಊಟದ ಜೊತೆಗೆ ಅಣಬೆ ಪದಾರ್ಥವನ್ನು ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಅಸ್ವಸ್ಥಗೊಂಡವರನ್ನು ರಾಘವ(42), ಲತಾ(35), ತ್ರಿಶಾ(10), ಕೇಶವ(45), ಅರ್ಚನಾ(10), ಹೊನ್ನಮ್ಮ(60), ಬೇಬಿ(35) ಎನ್ನಲಾಗಿದೆ ಹಾಗೂ ಇತರ ಬಗೆಗಿನ ಮಾಹಿತಿ ಲಭ್ಯವಾಗಿಲ್ಲ.
ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.