ಮಂಗಳೂರು: ಬಜರಂಗದಳ ಸುರತ್ಕಲ್ ನಲ್ಲಿ ಅ.5 ರಂದು ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಕೋಮು ವೈಷಮ್ಯ ಹೆಚ್ಚಿಸುವ ಪ್ರಚೋಧನಕಾರಿ ಭಾಷಣ ಹಾಗೂ ಕೋಟಿ- ಚೆನ್ನಯರ ಆಯುಧವನ್ನು ರೌಡಿಗಳು ಬಳಸುವ ತಲವಾರಿಗೆ ಹೋಲಿಸಿ ಪವಿತ್ರ ನಂಬಿಕೆಗೆ ಘಾಸಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳವಂತೆ ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬಂಟ್ವಾಳದ ಬೊಂಡಾಲ ಚಿತ್ತರಂಜನ್ ಶೆಟ್ಟಿ ರವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಒಂದು ಕೋಮಿನವರನ್ನು ಎತ್ತಿ ಕತ್ತುವ ಕೋಮು ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದ್ದು, ಈಕೆಯ ಹಾಗೂ ಬಜರಂಗದಳ ಸಂಘಟಕರ ವಿರುದ್ದ ಕೇಸು ದಾಖಲಿಸಬೇಕು. ಇದರ ಜೊತೆಗೆ ಕಾಂಗ್ರೆಸ್ ಮುಖಂಡರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿ ಅವಮಾನ ಮಾಡಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.