ಪುತ್ತೂರು: ಬನ್ನೂರಿನಿಂದ ಪುತ್ತೂರು ಪೇಟೆಗೆ ಬರುತ್ತಿದ್ದ ಕಾರು ಹಾರಾಡಿಯ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು, ಕಾರು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಘಟನೆ ಅ.7 ರಂದು ಬೆಳಿಗ್ಗೆ ನಡೆದಿದೆ.
ಘಟನೆಯಿಂದ ಬೈಕ್ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.