ಬಂಟ್ವಾಳ: ಹೈದರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಅ.06 ರಂದು ವರದಿಯಾಗಿದೆ.
ಮೃತರನ್ನು ಸಜಿಪಮೂಡ ಗ್ರಾಮದ ಬೊಳ್ಳಾಯಿ ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ.
ಪ್ರಶಾಂತ್ ಶೆಟ್ಟಿ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.