ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಹಿತ್ತಾಳೆ ದೀಪ ಕಳವು ನಡೆಸಿದ ಘಟನೆ ತೊಕ್ಕೊಟ್ಟುವಿನ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ.
ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಒಂಟಿ ಬಂಗಲೆಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಹಿಂಬಾಗಿಲನ್ನು ಮುರಿದು ಕಳ್ಳರು ಕೈಚಳಕ ತೋರಿಸಿದ್ದಾರೆ.
ಮನೆಯಲ್ಲಿ ಯಾರು ವಾಸವಿಲ್ಲದ ಕಾರಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳವಾದ ಸೊತ್ತಿನ ಮೌಲ್ಯ 1.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿದ್ದಾರೆ.