ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ರವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಆಲಿ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಕುರ್ ಹಾಜಿ, ಬ್ಲಾಕ್ ಉಪಾಧ್ಯಕ್ಷರಾದ ಮೌರಿಸ್ ಮಸ್ಕರನೇಸ್, ಮಹಾಬಲ ರೈ, ನಗರಸಭೆಯ ಸದಸ್ಯರಾದ ಯೂಸುಫ್ ಡ್ರೀಮ್, ಕಾರ್ಮಿಕ ಘಟಕದ ಅಧ್ಯಕ್ಷರಾದ ಶರೂನ್ ಸಿಕ್ವೇರಾ, ಎನ್ ಎಸ್ ಯು ಐ ವಿದ್ಯಾರ್ಥಿ ಮುಖಂಡರಾದ ಭಾತೀಷ್ ಅಳಕೆಮಜಲ್, ತಮೀಝ್ ಕೊಲ್ಪೆ, ಬ್ಲಾಕ್ ಕಛೇರಿ ಕಾರ್ಯದರ್ಶಿ ಜೋನ್ ಸಿರಿಲ್ ರೊಡ್ರಿಗಸ್ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.




























