ಪುತ್ತೂರು: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರವರ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾರದಾ ಅರಸ್ ರವರ ಶಿಫಾರಸ್ಸಿನ ಮೇರೆಗೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಉಪಾಧ್ಯಕ್ಷರನ್ನಾಗಿ ಸಹರ ಬಾನು ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ವಿಜಯಲಕ್ಷ್ಮಿ ರವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ರವರು ನೇಮಕಗೊಳಿಸಿ ಆದೇಶಿಸಿದ್ದಾರೆ.
ಶಹರ ಬಾನು ಹಾಗೂ ಕೆ ವಿಜಯಲಕ್ಷ್ಮಿ ಯವರು ಈ ಹಿಂದೆ ಪುತ್ತೂರು ಬ್ಲಾಕ್ ನ ಮಹಿಳಾ ಕಾಂಗ್ರೆಸ್ಸಿನ ಪದಾಧಿಕಾರಿಗಳಾಗಿ ಪಕ್ಷ ಸಂಘಟನೆ ತೊಡಗಿಸಿಕೊಂಡವರು ಆಗಿರುತ್ತಾರೆ.