ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ಆಶ್ರಯದೊಂದಿಗೆ ಶ್ರೀ ವಿಷ್ಣು ಯುವಶಕ್ತಿ ಬಳಗ (ರಿ.) ಮಜ್ಜಾರಡ್ಕ ಇದರ ವತಿಯಿಂದ “ಆಜಾದಿ ಕಾ ಅಮೃತಮಹೋತ್ಸವ” “ಸ್ವಚ್ಛ ಭಾರತ್” ಕಾರ್ಯಕ್ರಮದಡಿಯಲ್ಲಿ ಅ.08 ರಂದು ತಿಂಗಳಾಡಿ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತೆ ಮಾಡುವ ಮೂಲಕ ಅಲ್ಲಿದ್ದ ಪ್ಲಾಸ್ಟಿಕ್ ಕಸಕಡ್ಡಿಗಳನ್ನು ಒಂದು ಗೋಣಿಚೀಲದಲ್ಲಿ ಹಾಕಿ ಮಜ್ಜಾರಡ್ಕದಲ್ಲಿ ಸಂಗ್ರಹಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀ ವಿಷ್ಣು ಯುವಶಕ್ತಿ ಬಳಗದ ಕಾರ್ಯಕರ್ತರು ಉಪಸ್ಥಿತರಿದ್ದರು.