ವಿಟ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕಜೆಯಿಂದ 1 ರಿಂದ 7 ನೇ ತರಗತಿಯ ಪಠ್ಯ ಪುಸ್ತಕವನ್ನು ಮತ್ತು ಸರಕಾರಿ ಪ್ರೌಢ ಶಾಲೆ ಕಲ್ಲಂಗಳ ಕೇಪು ಇಲ್ಲಿಂದ 8 ರಿಂದ 10 ನೇ ತರಗತಿಯ ಪಠ್ಯ ಪುಸ್ತಕಗಳನ್ನು ಶಾಲೆಯ ಶಿಕ್ಷಕರು ಕೇಪು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಭವ್ಯಾಕುಮಾರಿ ತಿಳಿಸಿದರು.