ಪುತ್ತೂರು: ಜೆಸಿಬಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಅಷ್ಮಿ ಕಂಪರ್ಟ್ಸ್ ಬಳಿ ಅ.10 ರಂದು ನಡೆದಿದೆ.
ಕಾರಿನಲ್ಲಿ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕರಾದ ಪ್ರಶಾಂತ್ ಮತ್ತು ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈ ಪ್ರಯಾಣಿಸುತ್ತಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಬಂಟರ ಸಂಘದ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದೆ ಎಂದು ತಿಳಿದು ಬಂದಿದೆ.