ಪುತ್ತೂರು: ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟಿರುವ ಸಿಸಿ ಕ್ಯಾಮರಾಗಳನ್ನು ದುರಸ್ಥಿ ಮಾಡುವಂತೆ ವಿಶ್ವ ಹಿಂದೂ ಪರಿಷದ್ ಪುತ್ತೂರು ವತಿಯಿಂದ ನಗರ ಠಾಣಾ ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು.
ಪುತ್ತೂರು ನಗರದ ಆಯಕಟ್ಟಿನ ಪ್ರದೇಶಗಳಾದ ಸಾಲ್ಮರ, ದರ್ಬೆ, ಕೂರ್ನಡ್ಕ,ಬನ್ನೂರು ಮುಂತಾದ ಕಡೆಗಳಲ್ಲಿ ಸಾರ್ವಜನಿಕ ರಕ್ಷಣೆ ಹಾಗೂ ಸುರಕ್ಷತೆಗಾಗಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಸರಿಯಾಗಿ ಕಾರ್ಯ ನಿರ್ವಹಿಸದಿರುವುದು ಗಮನಕ್ಕೆ ಬಂದಿರುತ್ತದೆ. ಆದುದರಿಂದ ಸದರಿ ಪ್ರದೇಶಗಳ ಸಿಸಿ ಕ್ಯಾಮರಾಗಳನ್ನು ದುರಸ್ಥಿಪಡಿಸಿ, ನಿರ್ವಹಣೆಗೆ ಶಾಶ್ವತ ವ್ಯವಸ್ಥೆಯನ್ನು ಮಾಡಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.