ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಆರೋಪಿ ನಿಜಾಮ್ (26) ಮೇಲೆ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪವಿದೆ. ಹೀಗಾಗಿ ಈತನನ್ನು ಪೊಲೀಸರು ಬಂಧಿಸಿ ಠಾಣೆಯ ಸೆಲ್ ನಲ್ಲಿರಿಸಿದ್ದರು. ಆದರೇ ಠಾಣೆಯಲ್ಲಿ ಸಿಬ್ಬಂದಿಗಳು ಇಲ್ಲದ ಸಮಯ ನೋಡಿ ಆರೋಪಿ ನಿಜಾಮ್ ಲಾಕಪ್ ನಿಂದ ಪರಾರಿಯಾಗಿದ್ದಾನೆ.
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಎಸ್ಕೇಪ್ ಆಗಿರುವ ಆರೋಪಿಯನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.