ಪುತ್ತೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಇಬ್ಬರು ಪೊಲೀಸ್ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಗಳಾದ ಪ್ರತಾಪ್ ರೆಡ್ಡಿ ಮತ್ತು ಸಂಜೀವ ಗೌಡ ವರ್ಗಾವಣೆಗೊಂಡವರು.
2019-20ನೇ ಸಾಲಿನಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ತರಬೇತಿ ಮುಗಿಸಿ ಇಬ್ಬರು ಕರ್ತವ್ಯಕ್ಕೆ ಸೇರ್ಪಡೆಗೊಂಡಿರುವ ಇವರಿಬ್ಬರು ತಮ್ಮ ಕರ್ತವ್ಯ ಪ್ರಜ್ಞೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.