ಪುತ್ತೂರು: ಬ್ಲಾಕ್ ಕಾಂಗ್ರೆಸ್ ನ ಪ್ರತಿ ಮಾಸಿಕ ಸಭೆಯಲ್ಲಿ ನಿರ್ಧರಿಸಿದಂತೆ ಓರ್ವ ಕಾಂಗ್ರೆಸ್ ಹಿರಿಯ ಸದಸ್ಯರಿಗೆ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದರಂತೆ ಅನಾರೋಗ್ಯ ಸಮಸ್ಯೆಯಿಂದ ಬ್ಲಾಕ್ ಸಭೆಗೆ ಬರಲಾಗದ ಹಿರಿಯ ಕಾಂಗ್ರೆಸ್ ಮುಖಂಡ ಮುರ ಪುತ್ತು ಹಾಜಿಯವರನ್ನು ಸನ್ಮಾನಿಸಲಾಯಿತು.
ಭಾರತ್ ಲೈಮ್ ಇಂಡಸ್ಟ್ರೀಸ್ ಹಾಗೂ ಭಾರತ್ ಬೀಡಿ ಸಂಸ್ಥೆಯ ಮಾಲಕರಾದ ಪುತ್ತು ಹಾಜಿಯವರು ಕಾಂಗ್ರೆಸ್ ಹಿರಿಯ ಮುಖಂಡರುಗಳಾದ ಕೆ ಕೆ ಶೆಟ್ಟಿ, ವೀರಪ್ಪ ಮೊಯಿಲಿ, ಜನಾರ್ದನ ಪೂಜಾರಿ, ಬಿ ಸಂಕಪ್ಪ ರೈ, ಕೆ ಪಿ ಅಬ್ದುಲ್ಲ ರವರ ಒಡನಾಡಿಯಾಗಿದ್ದರು, ಹಿಂದಿನ ಕಬಕ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ 20 ವರ್ಷಗಳ ಕಾಲ ಪುತ್ತೂರು ಬ್ಲಾಕ್ ನ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಮತ್ತು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಸನ್ಮಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್,ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಅರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ರೈ, ಸ್ಥಳೀಯ ಯುವ ಕಾಂಗ್ರೆಸ್ ಮುಖಂಡ ರಶೀದ್ ಮುರ, ನಗರ ಸಭಾ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡ್, ಪುತ್ತು ಹಾಜಿಯ ಪುತ್ರ ನ್ಯಾಯವಾದಿ ಎಂ ಪಿ ಅಬೂಬಕ್ಕರ್ ಉಪಸ್ಥಿತರಿದ್ದರು.