ಸುಳ್ಯ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಬಂಗ್ಲೆಗುಡ್ಡೆ ಲಿಖಿತ್(22) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯ ಅಡ್ಡಕ್ಕೆ ಹಗ್ಗ ಹಾಕಿ ನೇಣು ಹಾಕಿದ್ದ, ಕೂಡಲೇ ಮನೆಯವರು ಆತನನ್ನು ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಅಲ್ಲಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಿದಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.