ಪುತ್ತೂರು: ಅಕ್ಷಯ ಗ್ರೂಪ್ ನ ನೂತನ ಮಳಿಗೆಯಾದ “ಅಕ್ಷಯ ಆರ್ಕೇಡ್” ಅ.17 ರಂದು ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಉದ್ಘಾಟನೆಗೊಳ್ಳಲಿದೆ.
ಸಂಕೀರ್ಣವನ್ನು ಸೋಲೂರು ಮಠ, ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತನಂದ ಸ್ವಾಮೀಜಿ ಉದ್ಘಾಟನೆಗೊಳಿಸಲಿದ್ದಾರೆ. ಕಚೇರಿ ಉದ್ಘಾಟನೆಯನ್ನು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪುತ್ತೂರು ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಯು.ಪಿ. ಶಿವಾನಂದ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಸಂಪ್ಯ ಗ್ರಾಮಾಂತರ ಠಾಣಾಧಿಕಾರಿ ಎಮ್. ವೈ. ಉದಯರವಿ, ಕೇಂದ್ರ ಸಮಿತಿ ಯುವವಾಹಿನಿ ಅಧ್ಯಕ್ಷ ಡಾ.ರಾಜಾರಾವ್ ಕೆ.ಬಿ., ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕೆ.ಸಿ. ಸಾದಿಕ್, ರೋಟರಿ ಪೂರ್ವ ಅಧ್ಯಕ್ಷ ಪುರಂದರ ರೈ, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ಮಾಧವ ರೈ, ಬಾಬು ಪೂಜಾರಿ ಬಡಕ್ಕೋಡಿ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ಎಸ್.ಕೆ. ಬಿಲ್ಡರ್ಸ್ ನ ಸಂತೋಷ್ ಕುಮಾರ್ ಕೊಟ್ಟಿಂಜ ರವರಿಗೆ ಗೌರವಾರ್ಪಣೆ ನಡೆಯಲಿದೆ.
“ಅಕ್ಷಯ ಆರ್ಕೇಡ್” ನ ವೈಶಿಷ್ಟ್ಯ:
ವಾಣಿಜ್ಯ ಸಂಕೀರ್ಣಗಳು ಮತ್ತು ವಸತಿ ಸೌಲಭ್ಯ, 250 ಆಸನಗಳ ಹವಾನಿಯಂತ್ರಿತ ಸಭಾಭವನ, 200 ಆಸನಗಳ ಮಿನಿಹಾಲ್, 1,000 ಅತಿಥಿಗಳಿಗೆ ಸೌಲಭ್ಯವಿರುವ ಕಲ್ಯಾಣ ಮಂಟಪ ಮತ್ತು ಡೈನಿಂಗ್ ಹಾಲ್ ಸೌಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.